ಕರಾವಳಿ
ಜಿಲ್ಲಾ ಮಟ್ಟದ “ಕರ್ನಾಟಕ ರಾಜ್ಯೋತ್ಸವ” ಕಾರ್ಯಕ್ರಮ ಪೂರ್ವ ತಯಾರಿ

ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ 01-11-2021 ರಂದು ನಡೆಯಲಿರುವ ಜಿಲ್ಲಾ ಮಟ್ಟದ “ಕರ್ನಾಟಕ ರಾಜ್ಯೋತ್ಸವ” ಕಾರ್ಯಕ್ರಮದ ಪೂರ್ವ ತಯಾರಿಯ ಬಗ್ಗೆ ಇಂದು ದಿನಾಂಕ 31-10-2021 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಉಡುಪಿ ತಹಶೀಲ್ದಾರರಾದ ಪ್ರದೀಪ್ ಕುರ್ಡೆಕರ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಪೊಲೀಸ್ ಉಪಾಧೀಕ್ಷಕರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಉಡುಪಿಯ ರಾಘವೇಂದ್ರ, ಕ್ರೀಡಾ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಉಪಸ್ಥಿತರಿದ್ದರು.