ಹೆಬ್ರಿ : ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಸ್ಫೋಟ – ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು

ಹೆಬ್ರಿ : ಸರಕಾರಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ತೀವ್ರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನ.09 ರ ಸಂಜೆ ನಡೆದಿದೆ.
ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಗಳಿಗೆ ಬೆಂಕಿ ಹಚ್ಚುವ ವೇಳೆ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದೆ.
ಹೊರ ಜಿಲ್ಲೆಯಿಂದ ಇಲ್ಲಿಗೆ ವಿದ್ಯಾಭ್ಯಾಸಕ್ಕೆ ಬಂದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಶ್ರೀನಿವಾಸ್ ಅಮರೀಶ್ ಹಾಗೂ ಐದನೆ ತರಗತಿಯ ವಿನೋದ್ ಮತ್ತು ಮನೋಜ್ ಗಾಯಗೊಂಡವರು. ಇಲ್ಲಿ ಒಟ್ಟು ಐವತ್ತು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಘಟನೆಯ ಸಂದರ್ಭದಲ್ಲಿ ಹಾಸ್ಟೆಲ್ ನಲ್ಲಿ ವಾರ್ಡನ್ ಇಲ್ಲದ ಕಾರಣ ಅಡುಗೆ ಸಹಾಯಕಿ ಒಬ್ಬರೆ ಇದ್ದಿದ್ದರೂ. ವಾರ್ಡನ್ ಅವರ ಪರಿಚಯಸ್ಥರ ವಾಹನದಲ್ಲಿ ನಾಲ್ವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,. ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದ್ದ ಕಾರಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಬಗ್ಗೆ ಮರುದಿನ ಮಧ್ಯಾಹ್ನ ತನಕ ಸ್ಥಳೀಯ ಪಂಚಾಯತ್ ಸೇರಿದಂತೆ ಯಾರಿಗೂ ಘಟನೆ ಬಗ್ಗೆ ಮಾಹಿತಿ ಇರಲಿಲ್ಲ ಎಂದು ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ ತಿಳಿಸಿದ್ದಾರೆ. ಘಟನೆಗೆ ವಾರ್ಡನ್ ನೇರ ಹೊಣೆ ಯಾಗುತ್ತಾರೆ. ಸಂಬಂಧಪಟ್ಟವರು ಇವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ .ಈ ಪ್ರಕರಣ ಬೆಳಕಿಗೆ ಬರಬಾರದು ಎಂದು ವಾರ್ಡನ್ ಅಡುಗೆ ಸಹಾಯಕಿ ರವರಿಗೆ ತಾಕೀತು ಮಾಡಿದ್ದಾರೆಂದು ತಿಳಿದು ಬಂದಿದೆ. ರಾಜ್ಯದೆಲ್ಲೆಡೆಯಿಂದ ಬಡ ವಿದ್ಯಾರ್ಥಿಗಳು ಇಲ್ಲಿದ್ದಾರೆ ಅವರ ಬಗ್ಗೆ ಇಲಾಖೆ ನಿರ್ಲಕ್ಷ ತೋರುತ್ತಿದೆ ರಾತ್ರಿಹೊತ್ತು ನೋಡಿಕೊಳ್ಳಲು ಯಾರೂ ವಾರ್ಡನ್ ಇರುವುದಿಲ್ಲ ಎಂದು ಗ್ರಾ.ಪಂ ಸಾಮಾಜಿಕ ನ್ಯಾಯಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ ಹೇಳಿದ್ದಾರೆ.