
ಫಲಾನುಭವಿಗಳಿಗೆ ಸಹಾಯ ಅನುಕೂಲವಾಗುವ ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಯೋಜನೆಯನ್ನು ತಕ್ಷಣ ಜಾರಿಗೆ ತರಲು ಸುಪ್ರೀಂ ಕೋರ್ಟ್ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರದ ಈ ಯೋಜನೆ ಜಾರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ.
ಕೇಂದ್ರ ಸರ್ಕಾರದ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆ ಜಾರಿ ಮಾಡಲು ತಮ್ಮ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ, ಈಗಾಗಲೇ ಇದರ ಅನುಷ್ಠಾನ ಪ್ರಕ್ರಿಯೆಯಲ್ಲಿದೆ ಎಂದು ಸೋಮವಾರ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಹೊಸ ಪಡಿತರ ಚೀಟಿ ಪಡೆಯದೆ ಅರ್ಹ ಫಲಾನುಭವಿಗಳು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಭಾರತದಾದ್ಯಂತ ನ್ಯಾಯಬೆಲೆ ಅಂಗಡಿಗಳಿಂದ ಆಹಾರ ಧಾನ್ಯವನ್ನು ಪಡೆಯಲು ಈ ಯೋಜನೆ ಅವಕಾಶ ನೀಡುತ್ತದೆ.