
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ಹಾಗೂ ಇತರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಹಕಾರಿಯಾಗಲು “ಒನ್ ಶೋರ್ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್” ಇವರು ಕೊಡಮಾಡಿದ ರೂ. 27 ಲಕ್ಷ ವೆಚ್ಚದ 2 ಆಂಬುಲೆನ್ಸ್ ಗಳನ್ನು ಇಂದು ದಿನಾಂಕ 03-07-2021 ರಂದು ಶಾಸಕ ಶ್ರೀ ಕೆ ರಘುಪತಿ ಭಟ್ ರವರ ಸಮ್ಮುಖದಲ್ಲಿ ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ಶ್ರೀಪಾದರ ಮೂಲಕ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಒನ್ ಶೋರ್ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಹರೀಶ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ಡಾll ನಾಗಭೂಷಣ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.