ಕರಾವಳಿ
ಲಾಡ್ಜ್‌ವೊಂದರಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ

ಪುತ್ತೂರು: ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್‌ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅ.18 ರ ತಡರಾತ್ರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಮೃತರನ್ನು ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅ.16 ಕ್ಕೆ ಆ ವ್ಯಕ್ತಿ ಪುತ್ತೂರಿಗೆ ಬಂದು ಲಾಡ್ಜ್‌ನಲ್ಲಿ ರೂಮ್ ಮಾಡಿಕೊಂಡಿದ್ದು, ಅ.18 ರ ಮಂಗಳವಾರ ತಡರಾತ್ರಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಳಿಕ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.ಮೃತರ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.