ಕರಾವಳಿ
ಬಸ್ ಮತ್ತು ಬೈಕ್ ನಡುವೆ ಅಪಘಾತ : ಯುವಕ ಸ್ಥಳದಲ್ಲೇ ಸಾವು.!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ.
ಸಾವನ್ನಪ್ಪಿದ ಯುವಕ ಭರತ್ ಎಂದು ತಿಳಿದು ಬಂದಿದೆ. ಇನ್ನೋರ್ವ ಯುವಕ ಧನುಷ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ .