
ಜನ ಜಾಗೃತಿ ವೇದಿಕೆ ಉಡುಪಿ ವಲಯದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮವು ಉದ್ಯಾವರ ಕೇದಾರ್ ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶೇಖರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಜನ ಜಾಗೃತಿ ವೇದಿಕೆ ಉಡುಪಿ ವಲಯಾಧ್ಯಕ್ಷ ಗಣೇಶ್ ಕುಮಾರ್ ಸಂಪಿಗೆನಗರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಜನ ಜಾಗೃತಿ ವೇದಿಕೆಯ ಪ್ರಾದೇಶಿಕ ವಿಭಾಗ ಯೋಜನಾಧಿಕಾರಿ ನಾಗೇಶ್, ವೇದಿಕೆಯ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ಉಡುಪಿ ವಲಯ ಉಪಾಧ್ಯಕ್ಷ ಪ್ರತಾಪ್ ಕುಮಾರ್ ಉದ್ಯಾವರ, ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷ ಪುರಂದರ ಪೂಜಾರಿ, ಉದ್ಯಾವರ ಒಕ್ಕೂಟದ ಅಧ್ಯಕ್ಷೆ ಕುಮುದಾ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಗೀತಾ ಸ್ವಾಗತಿಸಿ, ಉಡುಪಿ ವಲಯ ಮೇಲ್ವಿಚಾರಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು. ಸ್ವಸಹಾಯ ಸಂಘದ ಸದಸ್ಯೆ ಮಾಲತಿ ವಂದಿಸಿದರು.