ಕರಾವಳಿ
ಉಡುಪಿ: ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಆತಂಕ ಮತ್ತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿಂದು 123 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 65807 ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 209 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 63998 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 7 ಜನ ಮೃತಪಟ್ಟಿದ್ದಾರೆ. ಈವೆರಗೂ ಒಟ್ಟು 385 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.