
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಅವರನ್ನು ಬಂಧಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪದಲ್ಲಿ ರಿಕ್ಕಿ ರೈ ಅವರು ಡ್ರಗ್ಸ್ ಆರೋಪಿಗಳ ಜೊತೆ ಸಂಪರ್ಕ ದಲ್ಲಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ರಿಕ್ಕಿ ರೈ ಮನೆಗಳ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿ, ರಿಕ್ಕಿ ರೈ ಅವರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಗೆ ಸಿಸಿಬಿ ಪೊಲೀಸರು ಮುತ್ತಪ್ಪ ರೈ ಅವರ ಬೆಂಗಳೂರಿನ ಹೊರವಲಯದ ಬಿಡದಿ ಹಾಗೂ ಸದಾಶಿವನಗರದಲ್ಲಿರುವ ನಿವಾಸ ಗಳ ಮೇಲೆ ದಾಳಿ ಮಾಡಿದ್ದರು.