
ಸುಳ್ಯ: ಸುಳ್ಯದ ಖಾಸಗಿ ಬಸ್ಸು ನಿಲ್ದಾಣದ ಬಳಿ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭ ಬುಲೆರೋ ವಾಹನ ಡಿಕ್ಕಿಯಾಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನಪ್ಪಿದ್ದಾರೆ .
ವಾಹನವು ಡಿಕ್ಕಿಯಾಗಿ ವ್ಯಕ್ತಿ ಗಂಭೀರವಾಗಿದ್ದರು ಇವರನ್ನು ಸರಕಾರಿ ಆಸ್ಪತ್ರೆಗೆ ಕೊಂಡೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ತೆರಳುವ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಅ0ದಾಜು ೪೫ ವರ್ಷ ಪ್ರಾಯದ ವ್ಯಕ್ತಿಯ ಕಿವಿಯಲ್ಲಿ ಟಿಕ್ಕಿ ಇದೆ. ಪರಿಚಯ ಸಿಗದೇ ಇರುವ ಹಿನ್ನೆಲೆಯಲ್ಲಿ ಅವರ ಮನೆಯವರಿಗೆ ವಿಷಯ ತಿಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.