
ಉಡುಪಿ ಜಿಲ್ಲೆಯಲ್ಲಿ 92 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-49, ಕುಂದಾಪುರ-24, ಕಾರ್ಕಳ-18 ಮತ್ತು ಹೊರ ಜಿಲ್ಲೆಯ ಓರ್ವ ವ್ಯಕ್ತಿ ಸೋಂಕಿಗೆ ಒಳಗಾಗಿದ್ದಾರೆ. 160 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 64254 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ 1260 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 387 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂನ್ 24 ರಂದು 2804 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 671042 ಮಂದಿಯನ್ನು ಪರೀಕ್ಷಿಸಲಾಗಿದೆ.