ಕರಾವಳಿ

ರೈತರಿಂದಲೇ ಬೆಳೆ ಸಮೀಕ್ಷೆ: ಜಿಲ್ಲಾಧಿಕಾರಿ

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜೂನ್ 28 ರಿಂದ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಲಾಗಿರುತ್ತದೆ.

ರೈತರು ಗೂಗಲ್ ಪ್ಲೇ-ಸ್ಟೋರ್‌ನಿಂದ ಅಥವಾ

https://play.google.com/store/apps/details?id=com.csk.Khariffarmer2021.cropsurvey

  ಲಿಂಕ್ ಬಳಸಿ, Kharif Season Farmer Crop Survey 2021-22 ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು.

ನಂತರ ಆಧಾರ್ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಆಧಾರ್‌ನಲ್ಲಿರುವಂತೆ ಮಾಹಿತಿಯನ್ನು ದಾಖಲಿಸಿ, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದರಿಂದ ಮೊಬೈಲ್ ಸಂಖ್ಯೆಗೆ ಓ.ಟಿ.ಪಿ ಬರುತ್ತದೆ. ಈ ಓ.ಟಿ.ಪಿ ನ್ನು ದಾಖಲಿಸಿ, ಮಾಸ್ಟರ್ ವಿವರ ಡೌನ್‌ಲೋಡ್ ಮಾಡಿಕೊಂಡು ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ನಂತರ ಸರ್ವೆ ನಂಬರ್‌ಗಳಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು.

 

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಅವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆ್ಯಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು -2021ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker