
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಿಯುಸಿ ರಿಪೀಟರ್ಸ್ ಗೆ ಗ್ರೇಸ್ ಮಾರ್ಕ್ ನೀಡಿ ಎಲ್ಲರನ್ನೂ ತೇರ್ಗಡೆಗೊಳಿಸಲು ಪರೀಕ್ಷಾ ಮಂಡಳಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ.
ಈ ಸಂಬಂಧ ಹೈಕೋರ್ಟ್ ಛಾಟಿಯೇಟು ಬೀಸಿದ ಬಳಿಕ ಪಿಯು ಮಂಡಳಿ ಸಮಿತಿಯೊಂದನ್ನು ಕೂಡ ರಚಿಸಿದೆ.
ಪಿಯುಸಿ ಪರೀಕ್ಷೆ ರದ್ದು ಪಡಿಸಿರುವಾಗ ರಿಪೀಟರ್ಸ್ ಮಾತ್ರ ಯಾಕೆ ಪರೀಕ್ಷೆ ಬರೆಯಬೇಕು ಎಂದು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗಿತ್ತು.
ಇದೇ ವೇಳೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಪಡಿಸಿ ಎಂದು ಬಿಜೆಪಿ ಎಂ ಎಲ್ ಸಿ ವಿಶ್ವನಾಥ್ ಮತ್ತೊಮ್ಮೆ ಆಗ್ರಹಿಸಿದ್ದಾರೆ.