
ಮಲ್ಪೆ ಮೀನುಗಾರರ ಸಂಘದಲ್ಲಿ ಇಂದು ದಿನಾಂಕ 16-08-2021 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು “ಮಲ್ಪೆ ಮೀನುಗಾರಿಕೆ ಬಂದರಿನ ಸಮಗ್ರ ನಿರ್ವಹಣೆ” ಕುರಿತಾಗಿ ಮೀನುಗಾರರ ಸಂಘದವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಮೀನುಗಾರರಿಗೆ ವ್ಯಾಕ್ಸಿನೇಷನ್ ಮಾಡುವ ಬಗ್ಗೆ ಹಾಗೂ ಬಂದರಿನ ಬಳಿ ವಾಹನಗಳ ಸಂಚಾರಕ್ಕೆ ಮತ್ತು ನಿಲುಗಡೆಗೆ ಸುಸಜ್ಜಿತವಾದ ವ್ಯವಸ್ಥೆ ಕಲ್ಪಿಸುವುದು ಹಾಗೂ ಎಲ್ಲಾ ಗೇಟ್ ಗಳಲ್ಲಿ ಸೆಕ್ಯೂರಿಟಿ ನೇಮಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ದಯಾನಂದ ಸುವರ್ಣ, ಮೀನುಗಾರಿಕೆ ಇಲಾಖೆಯ ಅಪರ ನಿರ್ದೇಶಕರಾದ ಡಿ. ತಿಪ್ಪೇಸ್ವಾಮಿ, ಕರಾವಳಿ ಕಾವಲು ಪಡೆ ಅಧೀಕ್ಷಕರಾದ ನಿಖಿಲ್, ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಕೆ. ಗಣೇಶ್, ಉಪನಿರ್ದೇಶಕರಾದ ಜಿ. ಎಂ ಶಿವಕುಮಾರ್, ಹಿರಿಯ ಸಹಾಯಕ ನಿರ್ದೇಶಕರಾದ ಸುಷ್ಮಾ, ತಾಲೂಕು ಆರೋಗ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಮಲ್ಪೆ ಪೋರ್ಟ್ ಅಂಡ್ ಫಿಶರೀಸ್ ಕಾರ್ಯಪಾಲಕ ಅಭಿಯಂತರರಾದ ಪಾಯದೇ, ಕರಾವಳಿ ಕಾವಲು ಪಡೆಯ ಪೊಲೀಸ್ ಉಪಾಧೀಕ್ಷಕರಾದ ಸುಲ್ಫಿ, ಮಲ್ಪೆ ಪೊಲೀಸ್ ಉಪನಿರೀಕ್ಷಕರಾದ ಶಕ್ತಿವೇಲು ಹಾಗೂ ಮಲ್ಪೆ ಮೀನುಗಾರರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.