ಕರಾವಳಿತಾಜಾ ಸುದ್ದಿಗಳು

ಕಾರ್ಮಿಕರು ಇಲಾಖೆಯ ಸೌಲಭ್ಯ ಪಡೆದು ಭವಿಷ್ಯ ರೂಪಿಸಿಕೊಳ್ಳಿ : ಶಾಸಕ ಖಾದರ್ ಕರೆ!

ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಂಡು ನೋಂದಣಿ ಕಾರ್ಡ್ ಪಡೆದರೆ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಇಲಾಖೆಯಿಂದ ಹಲವು ಸೌಲಭ್ಯಗಳಿದ್ದು, ಅದನ್ನು ಪಡೆದುಕೊಂಡು ಸುಂದರ ಭವಿಷ್ಯ ರೂಪಿಸಿಕೊಳ್ಳಲು ಅವಕಾಶ ಇದೆ ಎಂದು ಮಾಜಿ ಸಚಿವ, ಮಂಗಳೂರು ಶಾಸಕ ಯು ಟಿ ಖಾದರ್ ಹೇಳಿದರು.

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಒದಗಿಸುತ್ತಿರುವ ಆಹಾರ ಸಾಮಾಗ್ರಿ ಕಿಟ್ ವಿತರಿಸಿ ಮಾತನಾಡಿದ ಅವರು ಬಡ ಕಾರ್ಮಿಕರ ಹಿತ ಕಾಪಾಡುವ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲಿ ನೋಂದಣಿ ಕಾರ್ಯ ನಡೆಸಲಾಗುವುದು ಎಂದರು.

ಮಾಹಿತಿ ಕೊರತೆಯಿಂದ ಕಾರ್ಮಿಕರು ಸೌಲಭ್ಯದಿಂದ ವಂಚಿತರಾಗುತ್ತಿದ್ದು, ಇದನ್ನು ತಪ್ಪಿಸಲು ಅಧಿಕಾರಿ, ಜನಪ್ರತಿನಿಧಿಗಳು ಮಾಹಿತಿ ನೀಡುವ ಕಾರ್ಯ ಮಾಡಬೇಕು. ವಲಸೆ ಕಾರ್ಮಿಕರಿಗೂ ಮುಂದಿನ ದಿನಗಳಲ್ಲಿ ನೆರವು ನೀಡುವ ನಿಟ್ಟಿನಲ್ಲಿ ಇಲಾಖೆ ಕಮೀಷನರ್ ಜತೆ ಮಾತುಕತೆ ನಡೆಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಗೆ ಗುತ್ತಿಗೆದಾರರು ಪಾವತಿಸುವ ಶುಲ್ಕದಿಂದ ಪ್ರಸ್ತುತ ನೆರವು ನೀಡಲಾಗುತ್ತಿದೆ ಎಂದು ಖಾದರ್ ಹೇಳಿದರು.

ಈ ಸಂದರ್ಭ ಜಿ ಪಂ ಮಾಜಿ ಸದಸ್ಯರುಗಳಾದ ಉಮ್ಮರ್ ಫಾರೂಕ್ ಫರಂಗಿಪೇಟೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪುದು ಗ್ರಾ ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ ಎ, ಮೇರಮಜಲು ಗ್ರಾ ಪಂ ಸದಸ್ಯೆ ವೃಂದಾ ಮೊದಲಾದವರು ಉಪಸ್ಥಿತರಿದ್ದರು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!