
ನಂದಿಕೂರು ಕೈಗಾರಿಕಾ ಪ್ರದೇಶಕ್ಕೆ ಇಂದು ದಿನಾಂಕ 05-07-2021 ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ನಂದಿಕೂರು ಕೆ.ಐ.ಎ.ಡಿ.ಬಿ ಉದ್ಯಮಿಗಳ ಸಂಘದ ಉಪಾಧ್ಯಕ್ಷರಾದ ಭಾರತಿ ಶೆಟ್ಟಿ, ಸೃಷ್ಟಿ ವೆಂಚರ್ಸ್ ಆಡಳಿತ ನಿರ್ದೇಶಕರಾದ ಭೂಪತಿ ಶೆಟ್ಟಿ, ಕೈಗಾರಿಕೆಯ ಜಂಟಿ ನಿರ್ದೇಶಕರಾದ ಗೋಕುಲ್ ದಾಸ್ ನಾಯಕ್ ಉಪಸ್ಥಿತರಿದ್ದರು.