
ಬೆಳಪು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಆಕ್ಸಿಜನ್ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಅವರೊಂದಿಗೆ ಶಾಸಕ ಶ್ರೀ ಕೆ ರಘುಪತಿ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಎಸ್. ಎನ್. ಕ್ರೆಯೋಜನಿಕ್ಸ್ ಪ್ರೈವೇಟ್ ಲಿಮಿಟೆಡ್ ಆಡಳಿತ ನಿರ್ದೇಶಕರಾದ ಕೆ. ನಟರಾಜ್ ಹೆಗ್ಡೆ ಹಾಗೂ ಪ್ರಮುಖರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.