
ತುಮಕೂರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಛಾಯಾಗ್ರಾಹಕ ಮಾನಸ ಸ್ಟುಡಿಯೋ ಮಾಲಕ, ಹೇರೂರು ಅಶೋಕ್ ಶೆಟ್ಟಿ (58) ನಿನ್ನೆ ಶಿರಾದಲ್ಲಿ ನಡೆದ ಕಾರು ಹಾಗೂ ಲಾರಿ ಅಪಘಾತದಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ
ಅಶೋಕ್ ಶೆಟ್ಟಿ ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಪುತ್ರ ಪನ್ನಗ ಶೆಟ್ಟಿ ಹಾಗೂ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಜತೆ ಮನೆಗೆ ಬರುತ್ತಿರುವ ವೇಳೆಯಲ್ಲಿ ಸೋಮವಾರ ನಸುಕಿನ ಜಾವ ಈ ಅವಘಡ ನಡೆದಿದೆ
ಸದ್ಯ ಅಶೋಕ್ ಕುಮಾರ್ ಶೆಟ್ಟಿಯವರ ಮೃತದೇಹ ತುಮಕೂರಿನ ಆಸ್ಪತ್ರೆಯಲ್ಲಿದ್ದು ಮೃತದೇಹವನ್ನು ಮನೆಗೆ ತರುವ ಪ್ರಕ್ರಿಯೆಗಳು ನಡೆಯುತ್ತಿದೆ .
ಕುಂದಾಪುರ ಛಾಯಾಗ್ರಾಹಕ ಸಂಘದ ಅಧ್ಯಕ್ಷ ರಾಜು ದೇವಾಡಿಗ ಮಠದಬೆಟ್ಟು ಸೇರಿದಂತೆ ಸಂಘದ ಪದಾಧಿಕಾರಿಗಳು ತುಮಕೂರಿನಲ್ಲಿದ್ದು ಮೃತದೇಹ ಮನೆಗೆ ತರುವ ಪ್ರಕ್ರಿಯೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ .
ಅಶೋಕ್ ಕುಮಾರ್ ಶೆಟ್ಟಿ ಅವರು ಕುಂದಾಪುರ ತಾಲ್ಲೂಕು ಛಾಯಾಗ್ರಾಹಕರ ಸಂಘ ಹಾಗೂ ರಾಜ್ಯ ಛಾಯಾಗ್ರಾಹಕರ ಮಾಜಿ ಅಧ್ಯಕ್ಷರಾಗಿದ್ದರು ಹಾಗೂ ಸಂಚಲನಕಾರಿ ಆಗಿಯೂ ಕಾರ್ಯನಿರ್ವಹಿಸಿದ್ದರು
ಮೃತರು ಪತ್ನಿ, ಓರ್ವ ಪುತ್ರಿ ಓರ್ವ ಪುತ್ರನನ್ನು ಅಗಲಿದ್ದಾರೆ.