
ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇವರ ಆಶ್ರಯದಲ್ಲಿ ಪಕ್ಷದ ಸಂಸ್ಥಾಪಕ, ಪ್ರಖರ ರಾಷ್ಟ್ರೀಯವಾದಿ ಡಾll. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಸ್ಮರಣಾರ್ಥ ಹಮ್ಮಿಕೊಂಡಿರುವ “ವೃಕ್ಷರೋಪಣ” ಕಾರ್ಯಕ್ರಮ ಅಂಗವಾಗಿ “ಸಸ್ಯೋತ್ಸವ” ಉಚಿತ ಗಿಡಗಳ ವಿತರಣಾ ಮೇಳ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಇವರು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ 111 ಶವಗಳನ್ನು ಅಂತ್ಯ ಸಂಸ್ಕಾರ ಮಾಡಿದ ಪ್ರಶಾಂತ್ ಸಗ್ರಿ ಹಾಗೂ ಮುರಳಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಸ್ಥಳೀಯ ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.