
ಬೆಂಗಳೂರು : ಸ್ಯಾಂಡಲ್‌ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ವಿಧಿವಶರಾಗಿದ್ದಾರೆ.
ನಟ ದುನಿಯಾ ವಿಜಯ್ ಅವರು ಸಾಮಾಜಿಕ ಜಾಲತಾಣದಲ್ಲಿ ತನ್ನ ತಾಯಿಯ ಪೋಟೋವನ್ನು ಹಾಖಿ ಮತ್ತೆ ಹುಟ್ಟಿ ಬಾ ಅಮ್ಮಾ ಎಂದು ಬರೆದುಕೊಂಡಿದ್ದಾರೆ. ದುನಿಯಾ ವಿಜಯ್ ಅವರ ತಾಯಿ ಕೊರೊನಾ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡಿದ್ದರು.
ಆದ್ರೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ .