
ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕೊಡವೂರು ವಾರ್ಡಿನಲ್ಲಿ 3 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಇಂದು ದಿನಾಂಕ 08-07-2021 ರಂದು ಜುಮಾದಿನಗರ, ಕೆ. ಟಿ ಪೂಜಾರಿ ಮನೆ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಶ್ರೀ ರವಿರಾಜ್ ಹೆಗ್ಡೆ ಅಧ್ಯಕ್ಷರು ಕೆ.ಎಂ.ಎಫ್ ಹಾಗೂ ಕೆ.ಟಿ ಪೂಜಾರಿ ಮಾಜಿ ಅಧ್ಯಕ್ಷರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಇವರು ಭೂ ಮಾತೆಗೆ ಹಾಲನ್ನು ಅರ್ಪಿಸಿ ನೇಜಿ ನೀಡುವ ಮೂಲ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು.
ಕೆ.ಎಂ.ಎಫ್ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ಅವರು ಮಾತನಾಡಿದರು ಕೃಷಿಭೂಮಿಯ ಸುತ್ತಮುತ್ತಲಿನ ತೋಡುಗಳ ಹೂಳೆತ್ತಿ ಅಭಿವೃದ್ಧಿ ಗೊಳಿಸಿದ್ದರಿಂದಾಗಿ ಅನೇಕರು ಪ್ರೇರಿತರಾಗಿ ಕೃಷಿ ಚಟುವಟಿಕೆಯನ್ನು ಪುನಃ ಆರಂಭಿಸಿದ್ದಾರೆ ಎಂದು ಹೇಳಿದ ಅವರು ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರ ನೇತೃತ್ವದಲ್ಲಿ ಕೇದಾರೋತ್ಥಾನ ಟ್ರಸ್ಟ್ ರಚಿಸಿ ಇದರ ಮೂಲಕ ಹಡಿಲು ಭೂಮಿಯನ್ನು ಹಸನಾಗಿಸುತ್ತಿರುವುದು ದೇಶಕ್ಕೆ ಮಾದರಿಯಾದ ಕೆಲಸ ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು, ಸ್ಥಳೀಯರಾದ ಪ್ರಭಾತ್ ಕೊಡವೂರು, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸ್ಥಳೀಯ ಕೃಷಿಕರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.