
ಹಿಮಾಚಲ ಪ್ರದೇಶ: ಹಿರಿಯ ಕಾಂಗ್ರೆಸ್ ಮುಖಂಡ, ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರಸಿಂಗ್ ಗುರುವಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು.
ಆರು ದಶಕಗಳ ಕಾಲ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಮುಖ್ಯಮಂತ್ರಿ ಮತ್ತು ಸಂಸದರಾಗಿ ತಮ್ಮ ಕರ್ತವ್ಯನಿಷ್ಠೆಯಿಂದ ಜನರಿಗೆ ಪ್ರೇರಣೆ ನೀಡಿದ್ದರು. ಆಡಳಿತ ಮತ್ತು ಶಾಸಕಾಂಗ ಅನುಭವದಿಂದ ವೀರಭದ್ರ ಸಿಂಗ್ ಮೇರು ವ್ಯಕ್ತಿತ್ವದ ರಾಜಕಾರಣಿಯಾಗಿದ್ದರು
ಸೋಮವಾರ ರಾತ್ರಿ ಹೃದಯಾಘಾತದಿಂದ ಅವರನ್ನು ಶಿಮ್ಲಾದ ಇಂದಿರಾಗಾಂಧಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವಾ ನಾಲ್ಕು ಗಂಟೆಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.