
ಮಂಗಳೂರು : ಇಂದು ಬೆಳಿಗ್ಗಿನಿಂದಲೇ ಉತ್ತಮ ಮಳೆ ಆರಂಭಗೊಂಡಿದ್ದು, ದಟ್ಟ ಮೋಡ ಕವಿದು ಮಳೆಯೊಂದಿಗೆ ಗುಡುಗು ಸಿಡಿಲಿನ ಅಬ್ಬರವೂ ಇತ್ತು. ಜೂನ್ ತಿಂಗಳ ಪ್ರಾರಂಭದಲ್ಲಿ ಮಳೆ ಬಂದಿದ್ದು ಬಿಟ್ಟರೆ ನಂತರ ಮಳೆ ಸಂಪೂರ್ಣ ಮಾಯವಾಗಿತ್ತು. ಪರಿಣಾಮ ಭತ್ತ ಬೆಳೆಯವ ರೈತರು ಕಂಗಾಲಾಗಿದ್ದರು.
ಜುಲೈ 11 ಹಾಗೂ 12ರಂದು ಕೆಲವು ರಾಜ್ಯಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದೆ. ಮಹಾರಾಷ್ಟ್ರ, ಗೋವಾ, ಆಂಧ್ರ ಕರಾವಳಿ ಪ್ರದೇಶ, ತೆಲಂಗಾಣ, ಕರ್ನಾಟಕ, ಕೇರಳದಲ್ಲಿ ಜುಲೈ 8ರಿಂದ 12ರವರೆಗೆ ಅತಿ ಹೆಚ್ಚಿನ ಮಳೆ ದಾಖಲಾಗುವುದಾಗಿ ಮುನ್ನೆಚ್ಚರಿಕೆ ನೀಡಿದೆ.
ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವುದೆಂದು ತಿಳಿಸಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಆರಂಭವಾಗಲಿದೆ. ಕರಾವಳಿ ಜಿಲ್ಲೆಗಳಲ್ಲೂ ವರುಣ ಆರ್ಭಟಿಸಲಿದ್ದಾನೆ. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.