
ಉಡುಪಿಯಲ್ಲಿ ಹಮ್ಮಿಕೊಂಡಿರುವ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಚಾಂತಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡಿಲು ಭೂಮಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದೆ. ದಿನಾಂಕ 10-07-2021 ರಂದು ಹೇರೂರು ಮದಗ ಚಂದ್ರಶೇಖರ್ ಹೆಗ್ಡೆ ಅವರ ಮನೆ ಬಳಿ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಿರುವುದರಿಂದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಇಂದು ದಿನಾಂಕ 09-07-2021 ರಂದು ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿ ಪೂರ್ವ ತಯಾರಿಯ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸಿದರು.
ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 31 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ನಿರಂತರವಾಗಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ಸದಸ್ಯರಾದ ರಾಘವೇಂದ್ರ, ದಿನೇಶ್, ವಿನುತಾ, ರವಿಪ್ರಕಾಶ್, ಕೇದಾರೋತ್ಥಾನ ಟ್ರಸ್ಟ್ ನ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಹಾಗೂ ಸ್ಥಳೀಯ ಪ್ರಮುಖರು, ಕೃಷಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.