
ಉಡುಪಿ ವಿಧಾನಸಭಾ ಕ್ಷೇತ್ರದ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಂಬಳ್ಳಿ ಅಂಗನವಾಡಿ ಕೇಂದ್ರ ನಿರ್ಮಾಣಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಿಂದ ರೂ. 5 ಲಕ್ಷ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರೂ. 3 ಲಕ್ಷ ಒಟ್ಟು 8 ಲಕ್ಷ ರೂಪಾಯಿ ಮೊತ್ತ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 09-07-2021 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಉಪಾಧ್ಯಕ್ಷರಾದ ಉದಯ್ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಯೋಗಿತಾ, ಅಂಗನವಾಡಿ ಕಾರ್ಯಕರ್ತೆ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಕಲ್ಯಾಣಪುರ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.