
ಉಡುಪಿ : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲು ಉಡುಪಿ ಜಿಲ್ಲಾಡಳಿತ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಅಗಸ್ಟ್ 16 ರ ವರೆಗೆ ನೈಟ್‌ಕರ್ಪ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ತುರ್ತು ಅಗತ್ಯ ಸೇವೆಯನ್ನು ಪಡೆಯುವವರು ರೋಗಿಗಳು ಮತ್ತು ಅವರೊಂದಿಗಿರುವ ಪರಿಚಾರಕರು ಅಗತ್ಯತೆಗಾಗಿ ವ್ಯಕ್ತಿಗಳನ್ನು ಸಳಾಂತರಿಸಲು ಅನುಮತಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಕೈಗಾರಿಕೆಗಳು ಅಥವಾ ಕಂಪನಿಗಳಿಗೆ, ರಾತ್ರಿ ಸಮಯದಲ್ಲಿ ಕಾರ್ಯಾಚರಿಸಲು ಅನುಮತಿಯನ್ನು ನೀಡಲಾಗಿದೆ. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರ, ಸಂಸ್ಥೆಯಿಂದ ನೀಡಲಾದ ಸೂಕ್ತ ಗುರುತಿನ ಚೀಟಿ ಅಥವಾ ಅನುಮತಿಗೆ ಸಂಬಂಧಿಸಿದಂತೆ ದಾಖಲಾಯನ್ನು ನೀಡಿ ಪ್ರಯಾಣಿಸಬಹುದಾಗಿದೆ.
ಅಗಸ್ಟ್ 16 ರ ವರೆಗೆ ಈ ಆದೇಶ ಜಾರಿಯಲ್ಲಿರಲಿದ್ದು,ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಕ್ಕೆ, ಬಸ್ ನಿಲ್ದಾಣಕ್ಕೆ ಸಂಚರಿಸುವ ಸಾರ್ವಜನಿಕ ವಾಹನಗಳು ಹಾಗೂ ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಲಾಗಿದೆ. ಈ ವೇಳೆ ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳನ್ನು ನೀಡುವುದು ಕಡ್ಡಾಯಗೊಳಿಸಲಾಗಿದೆ. ಅಲ್ಲದೇ ಸರಕು ವಾಹನಗಳ ಓಡಾಟಕ್ಕೆ ಅನುಮತಿಸಲಾಗಿದ್ದು, ಆನ್‌ಲೈನ್ ಡೆಲಿವರಿ ಸರ್ವಿಸ್‌ಗೆ ಅವಕಾಶ ನೀಡಲಾಗಿದೆ. ಅಲ್ಲದೇ ಬಸ್ ಸೇವೆಗಳು, ರೈಲುಗಳು ಮತ್ತು ವಿಮಾನ ಪ್ರಯಾಣ ಎಂದಿನಂತೆಯೇ ಮುಂದುವರಿಯಲಿದೆ.