ಕರಾವಳಿ
ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ । ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ ಸಾಧ್ಯತೆ .

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಾಗೆಯೇ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆಯೂ ಎಚ್ಚರಿಕೆ ನೀಡಿದೆ.
ಕರಾವಳಿ, ಮಲೆನಾಡು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ ೧೧ ಮತ್ತು 1೨ ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾಗಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ .