ರಾಜಕೀಯಕ್ಕೆ ಗುಡ್ ಬೈ ಹೇಳಿದ ಸೂಪರ್ ಸ್ಟಾರ್ ರಜನಿಕಾಂತ್!!

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದಾರೆ.
ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಅನಾರೋಗ್ಯದ ಕಾರಣಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಸಂಪೂರ್ಣವಾಗಿ ವಿದಾಯ ಘೋಷಿಸಿದ್ದಾರೆ. ತಮ್ಮ ಪಕ್ಷ ರಜನಿ ಮಕ್ಕಳ್ ಮನ್ರಂ ಪಕ್ಷದ ನಿರ್ವಾಹಕರ ಜೊತೆಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಪ್ರಕಟಿಸಿದ ರಜನಿಕಾಂತ್ ಕೇವಲ ತಮ್ಮ ಅಭಿಮಾನಿಗಳ ಸಂಘ ಉಳಿಸಿಕೊಳ್ಳುವುದಾಗಿ ಹೇಳಿದ್ದರೆ.
ರಾಜಕೀಯ ಪ್ರವೇಶಿಸಲಿದ್ದೇನೆಯೇ ಎಂಬ ಬಗ್ಗೆ ಪ್ರಶ್ನೆಗಳಿವೆ… ನಾನು ಇದೆಲ್ಲವನ್ನು ಆರ್ ಎಂಎಂ ಪದಾಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಘೋಷಣೆ ಮಾಡುತ್ತೇನೆ ಎಂದು ನಟ ಸೋಮವಾರ ಹೇಳಿದ್ದಾರೆ. ‘ಕೋವಿಡ್, ಚುನಾವಣೆಗಳು ಮತ್ತು ಚಿತ್ರೀಕರಣ ಮತ್ತು ಯುಎಸ್ ನಲ್ಲಿ ವೈದ್ಯಕೀಯ ತಪಾಸಣೆಯಿಂದಾಗಿ ನಾನು ಈ ಮೊದಲು ಕಾರ್ಯಕರ್ತರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ರಾಜಕೀಯಕ್ಕೆ ಗುಡ್ ನಬೈ ಹೇಳಿದ್ದು, ಕೇವಲ ಅಭಿಮಾನಿಗಳ ಸಂಘವನ್ನು ಉಳಿಸಿಕೊಳ್ಳುವುದಾಗಿ ಹೇಳಿದ್ದಾರೆ.