ಕರಾವಳಿ
ಕೊರೋನಾಕ್ಕೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಬಲಿ

ಉಡುಪಿ :ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೊರೋನಾಕ್ಕೆ ಬಲಿಯಾಗಿದ್ದಾರೆ.
ಕಳೆದ ವರ್ಷದ ನವೆಂಬರ್ ನಿಂದ ಉಡುಪಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸೋಮಶೇಖರ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.
ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದ ಸೋಮಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಪ್ರಥಮ ದರ್ಜೆ ಸಹಾಯಕರಾಗಿ ಮುಂಬಡ್ತಿ ಹೊಂದಿದ್ದರು.
14 ದಿನಗಳಿಂದ ಕೊರೊನಾ ಪೀಡಿತರಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.