ಕರಾವಳಿ

ಕುಂದಾಪುರ ಸಂಚಾರ ಠಾಣಾ ಸಿಬ್ಬಂದಿಗೆ ಸೋಂಕು ದೃಢ: ಠಾಣೆ ಸೀಲ್ ಡೌನ್

ಕುಂದಾಪುರ: ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾಗಿದ್ದು, ಕೋವಿಡ್-19 ಸೋಂಕು ದೃಢಪಟ್ಟ ಪೊಲೀಸ್ ಸಿಬ್ಬಂದಿಯವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುವುದು. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುವುದು.

ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ತಾತ್ಕಾಲಿಕ ಠಾಣೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂದಾಪುರ ಉಪವಿಭಾಗ ಎ.ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!