ಕರಾವಳಿ
ಮರ ಬಿದ್ದು ಮನೆಗೆ ಹಾನಿ – ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ಸ್ಥಳಕ್ಕೆ ಭೇಟಿ ಪರಿಶೀಲನೆ

ಉಡುಪಿ ವಿಧಾನಸಭಾ ಕ್ಷೇತ್ರದ ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೆಕಟ್ಟೆ ನಿವಾಸಿ ಪೂರ್ಣಿಮಾ ಆಚಾರ್ಯ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದ್ದು, ಇಂದು ದಿನಾಂಕ 13-07-2021 ರಂದು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗರಿಷ್ಠ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ ಹಾಗೂ ತಹಶೀಲ್ದಾರರಾದ ರಾಜಶೇಖರ, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್, ಕಳ್ತೂರು ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.