ಕರಾವಳಿ
250 ಬೆಡ್ ಗಳ ಉಡುಪಿ ಜಿಲ್ಲಾ ಆಸ್ಪತ್ರೆ ನಿರ್ಮಾಣ – ಆರೋಗ್ಯ ಸಚಿವರೊಂದಿಗೆ ಶಾಸಕ ರಘುಪತಿ ಭಟ್ ಸ್ಥಳ ವೀಕ್ಷಣೆ

ಉಡುಪಿ ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆ ಈಗಾಗಲೇ ಅನುಮೋದನೆಗೊಂಡಿದ್ದು, ಇಂದು ದಿನಾಂಕ 14-07-2021 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾll ಕೆ. ಸುಧಾಕರ್ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಹೊಸ ಆಸ್ಪತ್ರೆ ನಿರ್ಮಾಣದ ಜಾಗ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಜಿಲ್ಲಾ ವೈದ್ಯಾಧಿಕಾರಿಗಳಾದ ನಾಗಭೂಷಣ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಮಧುಸೂದನ್ ನಾಯಕ್, ನೋಡಲ್ ಅಧಿಕಾರಿಗಳಾದ ಪ್ರಶಾಂತ್ ಭಟ್ ಮತ್ತು ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.