
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯ ಮಾರ್ಗಸೂಚಿ ದಿನಾಂಕ 29-08-2020 ರಲ್ಲಿ ಮಾರ್ಗಸೂಚಿಯಂತೆ ಕಂಟೈನ್ ಮೆಂಟ್ ಜೋನ್ ಹೊರತುಪಡಿಸಿ 9 ನೇ ತರಗತಿ ಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಶಾಲೆಯನ್ನು 21-09-20 ರಿಂದ ತೆಗೆದು ವಿದ್ಯಾರ್ಥಿ ಗಳ ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿತ್ತು.
ಆದರೆ ರಾಜ್ಯದಲ್ಲಿ ಕೊರೊನಾ ವೈರಸ್ ಕಡಿಮೆ ಯಾಗದ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆ ಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ. ಹೀಗಾಗಿ ಸೆಪ್ಟೆಂಬರ್ 2020 ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸ ಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ತಿಳಿಸಿದ್ದಾರೆ.