ರಾಜ್ಯ
ಯುವಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವು..!

ಧಾರವಾಡ: ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಕಾಶೀಮ ನಧಾಪ (೨೪) ಹಾಗೂ ಶರೀಫ ನದಾಪ (೨೦) ಮೃತಪಟ್ಟವರು. ಮೊಹರಂ ಹಬ್ಬದ ಹಿನ್ನೆಲೆಯಲ್ಲಿ ಕೆರೆಯಲ್ಲಿ ಸ್ನಾನ ಮಾಡಿ ಅಲಾಯಿ ಒಳಗಿನ ಬೆಂಕಿ ತುಳಿಯಲು ಈ ಇಬ್ಬರು ಯುವಕರು ತಯಾರಾಗಿದ್ದರು. ಈ ವೇಳೆ ಕಾಲುಜಾರಿ ಓರ್ವ ಯುವಕ ಕೆರೆಗೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಮತ್ತೋರ್ವನೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.