ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ

ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಇಂದು ದಿನಾಂಕ 11-04-2022 ರಂದು ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು. ಬಳಿಕ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಪುತ್ಥಳಿ ಅನಾವರಣಗೊಳಿಸಿದರು. ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ್ ಕಲ್ಮಾಡಿ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ರಶ್ಮಿ ಚಿತ್ತರಂಜನ್ ಭಟ್ ಮತ್ತು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಗೋವಿಂದಾಚಾರ್ಯರ ಮಗನಾದ ವಿನಯ ಭೂಷಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.