ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ – ಶಾಸಕ ರಘುಪತಿ ಭಟ್ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಅಂಬಾಗಿಲು ವಲಯ ವತಿಯಿಂದ ಪರಮಪೂಜ್ಯ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಶುಭಾಶೀರ್ವಾದಗಳೊಂದಿಗೆ ನಡೆಯುವ “ಲಾಭಾಂಶ ವಿತರಣೆ ಹಾಗೂ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ” ಉದ್ಘಾಟನೆಯನ್ನು ಇಂದು ದಿನಾಂಕ 16-07-2021 ರಂದು ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಅಂಬಲಪಾಡಿ ಇದರ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಕರಾವಳಿ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕರಾದ ವಸಂತ್ ಸಾಲ್ಯಾನ್, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್, ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶಿವಕುಮಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಡುಪಿ ತಾಲೂಕು ಯೋಜನಾಧಿಕಾರಿಗಳಾದ ರೋಹಿತ್, ತಿಮ್ಮಯ್ಯ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.