
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಉಡುಪಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಉಡುಪಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಂಬಲಪಾಡಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 16-07-2021 ರಂದು ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಮತ್ತು ಮಲೇರಿಯಾ/ ಡೆಂಗ್ಯೂ ವಿರೋಧಿ ಮಾಸಾಚರಣೆ 2021 ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಕರಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಹರೀಶ್ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ಜಿಲ್ಲಾ ವಾರ್ತಾಧಿಕಾರಿಗಳಾದ ಮಂಜುನಾಥ್, ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ, ಕರಾವಳಿ ಪ್ರಾದೇಶಿಕ ಕಚೇರಿ ಉಡುಪಿಯ ಪ್ರಾದೇಶಿಕ ನಿರ್ದೇಶಕರಾದ ವಸಂತ್ ಸಾಲ್ಯಾನ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೇರಿಗಾರ್, ಉಡುಪಿ ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ್ ಅಡಿಗ ಹಾಗೂ ಪ್ರಮುಖರು ಉಪಸ್ಥಿತರಿದ್ದರು.