ರಾಜ್ಯ
1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ; ಅಧಿಸೂಚನೆಯಲ್ಲಿ ಏನೇನಿದೆ..?

ಬೆಂಗಳೂರು: 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿಗೆ ಸಂಬಂಧಪಟ್ಟಂತೆ ಅರ್ಜಿಯನ್ನು ಆಹ್ವಾನಿಸಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (ಕಾಲೇಜು) ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಆಯ್ಕೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಆಯ್ಕೆ ಪ್ರಾಧಿಕಾರವನ್ನಾಗಿ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.