
ನವದೆಹಲಿ, ಜುಲೈ 18: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ರವಿವಾರ ರಂದು ಡೀಸೆಲ್ ದರದಲ್ಲಿ ಬದಲಾವಣೆಯಾಗಿದ್ದು, ಪೆಟ್ರೋಲ್ ಬೆಲೆ ಸ್ಥಿರವಾಗಿದೆ. ಡೀಸೆಲ್ ಬೆಲೆ 13 -18 ಪೈಸೆಯಂತೆ ಬೆಲೆ ಏರಿಕೆಯಾಗಿದೆ.
ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿದೆ. ಮೇ 4ರಿಂದ ಪೆಟ್ರೋಲ್ 11.14 ರು ಪ್ರತಿ ಲೀಟರ್ ಹಾಗೂ ಡೀಸೆಲ್ 9.14 ರು ಪ್ರತಿ ಲೀಟರ್ ಆಗಿದೆ
ದೆಹಲಿಯಲ್ಲಿ ದರ ಭಾನುವಾರದಂದು ಪೆಟ್ರೋಲ್ ಪ್ರತಿ ಲೀಟರ್‌ಗೆ 101.84ರು ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 89.87ರು ಆಗಿದೆ. ದೇಶದ ವಿವಧ ನಗರಗಳ ದರ ಪಟ್ಟಿ ವಿವರ ಮುಂದಿದೆ.
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83ರು ಪ್ರತಿ ಲೀಟರ್, ಡೀಸೆಲ್ 97.45ರು ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ. ಮೇ 29ರಂದು ಮೊದಲ ಬಾರಿಗೆ ಮುಂಬೈನಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ರಾಜಸ್ಥಾನ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರ, ಲಡಾಕ್, ಒಡಿಶಾ, ಮಣಿಪುರ, ಸಿಕ್ಕಿಂ ಹಾಗೂ ಮಹಾರಾಷ್ಟ್ರದ ಹಲವು ಪಟ್ಟಣಗಳಲ್ಲೂ ಪೆಟ್ರೋಲ್ ಬೆಲೆ 100 ರು ಗಡಿ ದಾಟಿದೆ. ರಾಜಸ್ಥಾನದ ಗಂಗಾನಗರ ಜಿಲ್ಲೆಯಲ್ಲಿ ಪ್ರತಿ ಪೆಟ್ರೋಲ್ ಬೆಲೆ ದೇಶದಲ್ಲೇ ಅತ್ಯಧಿಕ 113ರು ನಷ್ಟಿದೆ, ಡೀಸೆಲ್ ಬೆಲೆ 102.95ರು ಆಗಿದೆ. ಅಲ್ಲದೆ ರಾಜಸ್ಥಾನದ ಎಲ್ಲಾ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಬೆಲೆ 100 ರು ಗಡಿ ದಾಟಿದೆ.
ನಗರ-ಇಂಧನ ದರ ಪ್ರತಿ ಲೀಟರ್ ರುಗಳಲ್ಲಿ
ನವದೆಹಲಿ: ಪೆಟ್ರೋಲ್ 101.84ರು- ಡೀಸೆಲ್ 89.87ರು
ಕೋಲ್ಕತಾ: ಪೆಟ್ರೋಲ್ 102.08ರು- ಡೀಸೆಲ್ 93.02ರು
ಮುಂಬೈ: ಪೆಟ್ರೋಲ್ 107.83ರು- ಡೀಸೆಲ್ 97.45ರು
ಚೆನ್ನೈ: ಪೆಟ್ರೋಲ್ 102.58ರು- ಡೀಸೆಲ್ 94.47ರು
ಬೆಂಗಳೂರು: ಪೆಟ್ರೋಲ್ 105.25ರು- ಡೀಸೆಲ್ 95.26ರು.