
ಉಡುಪಿ : ಜಿಲ್ಲೆಯಲ್ಲಿ ಇಂದು 494 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ123, ಕುಂದಾಪುರ 191, ಕಾರ್ಕಳ 178 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ.
ಸದ್ಯ ಜಿಲ್ಲೆಯಲ್ಲಿ 4321 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇಂದು ಜಿಲ್ಲೆಯಲ್ಲಿ ಉಡುಪಿಯ ಇಬ್ಬರು ವ್ಯಕ್ತಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ. ಜೂ.5 ರಂದು ಜಿಲ್ಲೆಯಲ್ಲಿ 494 ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 57620 ಮಂದಿ ಗುಣಮುಖರಾಗಿದ್ದಾರೆ.