94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರ – ಶಾಸಕ ರಘುಪತಿ ಭಟ್ ವಿತರಣೆ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಫಲಾನುಭವಿಗಳಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ಇಂದು ದಿನಾಂಕ 19-07-2021 ರಂದು ಬ್ರಹ್ಮಾವರದ ಶಾಸಕರ ಕಚೇರಿಯಲ್ಲಿ ವಿತರಿಸಿದರು.
ಸುಮಾರು 20 ವರ್ಷಗಳಿಂದ ವಾಸವಾಗಿರುವ ಹಂದಾಡಿ ಗ್ರಾಮದ ನಿವಾಸಿ ಪ್ರಮೋದಿನಿ, ಶಾರದಾ ಶೆಟ್ಟಿಗಾರ್, ಸುಲೋಚನಾ, ಹಾರಾಡಿ ಗ್ರಾಮದ ನಿವಾಸಿ ಗಿರಿಜಾ ಪೂಜಾರ್ತಿ, ಹೇರೂರು ಗ್ರಾಮದ ನಿವಾಸಿ ಪ್ರೇಮ ಕುಮಾರಿ, ಸೇರಿದಂತೆ ಒಟ್ಟು ಐದು ಫಲಾನುಭವಿಗೆ 94/CC ಅಡಿಯಲ್ಲಿ ಖಾಯಂ ನಿವೇಶನ ಹಕ್ಕುಪತ್ರವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ಕೋಶಾಧಿಕಾರಿಗಳಾದ ಉದಯ್ ಕಾಮತ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೀರಾ ಸದಾನಂದ ಪೂಜಾರಿ, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ್ ಪೂಜಾರಿ, ಹಾವಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಉದಯ್ ಕೋಟ್ಯಾನ್ ಹಾಗೂ ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್, ಕಂದಾಯ ನಿರೀಕ್ಷಕರಾದ ಲಕ್ಷ್ಮೀನಾರಾಯಣ ಭಟ್ ಉಪಸ್ಥಿತರಿದ್ದರು.