
ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್ ಸಮೀಪ ಆತ್ಮಹತ್ಯಾ ಬಾಂಬರ್ ದಾಳಿ ನಡೆದಿದೆ. ಸ್ಫೋಟದಲ್ಲಿ ೩೫ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಜನ ನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ದಾಳಿ ನಡೆಸಲಾಗಿದೆ. ಅಬು ಹಂಸಾ ಅಲ್ ಇರಾಕಿ ಎಂಬ ಮಾನವ ಬಾಂಬರ್ ಈ ಕೃತ್ಯ ಎಸಗಿದ್ದಾನೆ ಎಂದು ಘಟನೆಯ ಹೊಣೆ ಹೊತ್ತುಕೊಂಡಿರುವ ಇಸ್ಲಾಮಿಕ್ ಸ್ಟೇಟ್ ಸಂಘಟನೆ ಹೇಳಿದೆ.
ಸಾದರ್ ನಗರದಲ್ಲಿ ಈ ದುರಂತ ನಡೆದಿದೆ. ಜನರು ಬಕ್ರೀದ್ ಹಬ್ಬದ ಖರೀದಿಯಲ್ಲಿ ನಿರತರಾಗಿದ್ದ ವೇಳೆ ಬಾಂಬ್ ಸ್ಫೋಟ ನಡೆಸಲಾಗಿದೆ.