ಉಡುಪಿ ಗ್ರಾಮಾಂತರ ವಿಶೇಷ ಕಾರ್ಯಕಾರಣಿ ಸಭೆ – ಶಾಸಕ ರಘುಪತಿ ಭಟ್ ಭಾಗಿ

ಬಹ್ಮಾವರ ಉನ್ನತಿ ಸಹಕಾರಿ ಮಂಟಪದಲ್ಲಿ ಇಂದು ದಿನಾಂಕ 20-07-2021 ರಂದು ನಡೆದ ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ ವಿಶೇಷ ಕಾರ್ಯಕಾರಣಿ ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಪ್ರಧಾನ ಕಾರ್ಯದರ್ಶಿ ಮನೋಹರ್ ಕಲ್ಮಾಡಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ್ ಹೇರೂರು, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಬಿ.ಎನ್ ಶಂಕರ್ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಹಾಗೂ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. ಕಮಲಾಕ್ಷ್ ಹೆಬ್ಬಾರ್ ಕಾರ್ಯಕ್ರಮದ ನಿರೂಪಣೆ ಮಾಡಿದರು.