ಬಕ್ರೀದ್ ಹಿನ್ನೆಲೆ ಮನೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ !

ಇಸ್ಲಾಮಾಬಾದ್ : ಬಕ್ರೀದ್ ಹಿನ್ನೆಲೆಯಲ್ಲಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ 30 ಜನರು ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್ ನ ಸಿಂಧೂ ಹೆದ್ದಾರಿಯಲ್ಲಿ ನಡೆದಿದೆ.
ಪ್ರಯಾಣಿಕರ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದು, ಇತರ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಅಪಘಾತ ಸ್ಥಳಕ್ಕೆ ತಕ್ಷಣವೇ ರಕ್ಷಣಾ ಸಿಬ್ಬಂದಿ ಧಾವಿಸಿ ಗಾಯಾಳುಗಳನ್ನು ಡೇರಾ ಘಾಜಿ ಖಾನ್ ನ ಡಿಎಚ್ ಕ್ಯು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡೇರಾ ಘಾಜಿ ಖಾನ್ ನ ಆಯುಕ್ತ ಡಾ.ಇರ್ಷಾದ್ ಅಹ್ಮದ್ ತಿಳಿಸಿದ್ದಾರೆ.
ಗಾಯಗೊಂಡ ಹಲವರ ಸ್ಥಿತಿ ಗಂಭೀರವಾಗಿದ್ದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ.
ಘಟನೆಯಲ್ಲಿ 30 ಮಂದಿ ಸಾವನ್ನಪ್ಪಿರುವುದನ್ನು ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಚೌಧರಿ ದೃಢಪಡಿಸಿದ್ದಾರೆ.