
ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ದಿನಾಂಕ 29-07-2021ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ಜೆ. ಮಂಜುನಾಥ್, ಜಿಲ್ಲಾಧಿಕಾರಿ, ಬೆಂಗಳೂರು ನಗರ ಜಿಲ್ಲೆ, ಕವಿತಾ ರಾಣಿ ಆರ್. ಉಪಕಾರ್ಯದರ್ಶಿ, ಕಂದಾಯ ಇಲಾಖೆ, ಕೆ. ಭಾನುಮತಿ, ಅಪರ ಕಾರ್ಯದರ್ಶಿ, ಮುಜರಾಯಿ ಮತ್ತು ಭೂಮಿ ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.