ರಾಜ್ಯ
ನೀರುಮಾರ್ಗ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಕಳ್ಳರು: ಕಾಣಿಕೆ ಡಬ್ಬಿ ಕಳವು ಸಿಸಿಟಿವಿಯಲ್ಲಿ ಸೆರೆ !

ಮಂಗಳೂರು: ನೀರುಮಾರ್ಗ ಜಂಕ್ಷನ್ ಸಮೀಪದಲ್ಲೇ ಇರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ದುಷ್ಕರ್ಮಿಗಳು ಕಾಣಿಕೆ ಡಬ್ಬಿ ಕಳವು ಮಾಡಿದ ಘಟನೆ ವರದಿಯಾಗಿದೆ.
ಭಜನಾ ಮಂದಿರಕ್ಕೆ ಪ್ರವೇಶಿಸಿದ ಇಬ್ಬರು ದುಷ್ಕರ್ಮಿಗಳು ಪ್ರಧಾನ ಗುಡಿಯ ಮುಂಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ್ದಾರೆ. ಕಾಣಿಕೆ ಡಬ್ಬಿಯಲ್ಲಿ 3500 ರೂ. ಅಧಿಕ ಹಣ ಇತ್ತೆಂದು ತಿಳಿದು ಬಂದಿದೆ.
ದುಷ್ಕರ್ಮಿಗಳ ಚಲನವಲನಗಳ ಸುಮಾರು 45 ನಿಮಿಷಗಳ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳವು ಕೃತ್ಯದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಜಾನ್ಸನ್ ಮತ್ತು ಸಿಬ್ಬಂದಿ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದೆ. ಸಿಸಿಟಿವಿ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.