
ಕಾಪು: ಉಚ್ಚಿಲ ಬಡಾ ಗ್ರಾಪಂ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ-ಪಣಿಯೂರು ಕ್ರಾಸಿಂಗ್ ಬಳಿ ಕಾರುಗಳು ಪರಸ್ಪರ ಡಿಕ್ಕಿಯಾಗಿ ಎರಡೂ ಕಾರುಗಳು ಜಖಂಗೊಂಡ ಘಟನೆ ಇಂದು ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಉಚ್ಚಿಲ ಬಳಿ ಮತ್ತೊಂದು ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ.
ಘಟನೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ, ತನಿಖೆ ನಡೆಸುತ್ತಿದ್ದಾರೆ.