
ಬೆಂಗಳೂರು : ಶಾಲೆ ಆರಂಭಿಸುವ ಸಲುವಾಗಿ ಎರಡು ದಿನದಲ್ಲಿ ಆಯುಕ್ತರ ವರದಿ ಕೈಸೇರಲಿದೆ. ವರದಿ ಕೈ ಸೇರಿದ ಬಳಿಕ ಚರ್ಚಿಸಿ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಇನ್ನೆರಡು ದಿನದಲ್ಲಿ ವರದಿ ನೀಡಲಿದ್ದಾರೆ. ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
10, 12 ನೇ ತರಗತಿಯನ್ನು ಆಗಸ್ಟ್ ಮೊದಲ ವಾರದಲ್ಲಿ ಆರಂಭಿಸಿ ನಂತರ ಉಳಿದ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಮಕ್ಕಳ ಭವಿಷ್ಯದ ಮತ್ತು ಕಲಿಕೆ ದೃಷ್ಟಿಯಿಂದ ಶೀಘ್ರವೇ ಶಾಲೆಗಳನ್ನು ಪುನಾರಂಭಗೊಳಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಶಾಲೆಯಲ್ಲಿ ಲಿಸಿಕೆ ಶಿಬಿರ ಆಯೋಜಿಸುವುದಾಗಿ ಹೇಳಿದ್ದಾರೆ.