
ಸರ್ಕಾರಿ ಭರವಸೆಗಳ ಸಮಿತಿ ಸಭೆ ಇಂದು ದಿನಾಂಕ 22-07-2021ರಂದು ಬೆಂಗಳೂರಿನ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಮಿತಿ ಅಧ್ಯಕ್ಷರಾದ ಶ್ರೀ ಕೆ. ರಘುಪತಿ ಭಟ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಸುದೀರ್ಘವಾದ ಚರ್ಚೆ ನಡೆಯಿತು.
ಎಲ್. ಕೆ. ಅತೀಕ್, ಪ್ರಧಾನ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಿದ್ಧೇಶ್ ಪಿ., ಜಂಟಿ ಕಾರ್ಯದರ್ಶಿ, ಎಜಾಜ್ ಎಚ್. ಮುಖ್ಯ ಇಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.