
ಜಮ್ಮು ಜಿಲ್ಲೆಯ ಅಂತರಾಷ್ಟ್ರೀಯ ಗಡಿಯಿಂದ 8 ಕಿ. ಮೀ ಒಳಗೆ ಇರುವ ಅಕ್ನೂರ್ ಪ್ರದೇಶದಲ್ಲಿ ಸಂಶಯಾತ್ಮಕವಾಗಿ ಹಾರಾಟ ನಡೆಸುತ್ತಿದ್ದ ಡ್ರೋನ್ ಒಂದನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಈ ಡ್ರೋನ್ ನಲ್ಲಿ 5 ಕೆ.ಜಿ ಸುಧಾರಿತ ಎಲ್ ಇಡಿ ಸ್ಪೋಟಕಗಳಿದ್ದವು ಎಂದು ಜಮ್ಮು ಕಾಶ‍್ಮೀರ ಪೊಲೀಸರು ತಿಳಿಸಿದ್ದಾರೆ.
ಡ್ರೋನ್ ಚಟುವಟಿಕೆಯ ಹಿಂದೆ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಕೈವಾಡ ಇದೆಯೇ ಮತ್ತು ಭಯೋತ್ಪಾದಕ ದಾಳಿಗೆ ಸಂಚನ್ನು ರೂಪಿಸುತ್ತಿದೆಯೇ ಎಂದು ಏಜೆನ್ಸಿಗಳು ತನಿಖೆ ನಡೆಸುತ್ತಿವೆ. ಈ ಹಿಂದೆಯೂ ಹಲವು ಬಾರಿ ಜಮ್ಮು ಕಾಶ್ಮೀರ ಗಡಿಯಲ್ಲಿ ಡ್ರೋನ್ ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಡಿ.ಜಿ.ಪಿ ದಿಲ್ ಬಾಗ್ ಸಿಂಗ್, ಭಯೋತ್ಪಾದಕ ಸಂಘಟನೆಗಳು ನಿರಂತರವಾಗಿ ಡ್ರೋನ್‌ಗಳನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲು ಪ್ರಯತ್ನಿಸುತ್ತಿವೆ. ಅದ್ದರಿಂದ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.